ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಜಿ.ಟಿ.ದೇವೇಗೌಡ ಅವರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡುತ್ತಿರುವುದು ರಾಜ್ಯದ ತನಿಖಾ ಸಂಸ್ಥೆ. ಕುಮಾರಸ್ವಾಮಿ ಪ್ರಭಾವ ಬೀರಲು ಸಾಧ್ಯವೇ ಇಲ್ಲ. ಆದರೆ ಸಿಎಂ ವಿರುದ್ಧ ತನಿಖೆ ಮಾಡುತ್ತಿರುವುದು ಅವರ ಕೈಕೆಳಗಿರುವ ಸಂಸ್ಥೆ. ಹೀಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.