Mysore
34
scattered clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಸಿಎಂ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಶಾಸಕ ಶ್ರೀವತ್ಸ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ನೀವು ಸಿಎಂ ಆಗಿರುವವರೆಗೂ ಎಫ್‌ಐಆರ್‌ ದಾಖಲಿಸಲು ಆಗಲ್ಲ. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು.

 

Tags:
error: Content is protected !!