ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರು ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದರು.
ದೇವರಾಜ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದೆ. ಇದನ್ನು ನವೀಕರಣ ಮಾಡಬೇಕು ಎನ್ನುವುದು ನಮ್ಮ ಆಶಯ. ಇಡೀ ಕಟ್ಟಡ ಶಿಥಿಲಗೊಂಡಿಲ್ಲ. ಎಲ್ಲಿ ಶಿಥಿಲ ಆಗಿದೆಯೋ ಅಲ್ಲಿ ನವೀಕರಣ ಮಾಡಬಹುದು ಎಂದು ಹೇಳಿದರು.
2016ರಲ್ಲಿ ಒಂದು ಭಾಗದಲ್ಲಿ ಕಟ್ಟಡ ಕುಸಿಯಿತು. ಕಟ್ಟಡ ಶಿಥಿಲಗೊಂಡಿದೆ ಎಂದು ಬಿಂಬಿಸಲು ಬೇಕಂತಲೇ ಅದನ್ನು ಬೀಳಿಸಲಾಗಿದೆ. ತಜ್ಞರ ಆಯೋಗ ಪರಿಶೀಲಿಸಿ ಕಟ್ಟಡ ಸುಸ್ಥಿತಿಯಲ್ಲಿದೆ ಎಂದು ವರದಿ ನೀಡಿದೆ. ಅದನ್ನು ಕೂಡ ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡು ಸಕರಾತ್ಮಕ ತೀರ್ಪು ನೀಡುವ ಭರವಸೆ ಇದೆ. ನ್ಯಾಯಾಲಯ ಏನೇ ತೀರ್ಪು ನೀಡಿದರೂ ಅದಕ್ಕೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದರು.
ನಿನ್ನೆ ನಡೆದ ಮೈಸೂರು ಅಭಿವೃದ್ಧಿ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಶಿಥಿಲ ವ್ಯವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…