ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆ ಸಿದ್ಧವಾಗಿದ್ದರೂ ಅದನ್ನು ಅನಾವರಣ ಮಾಡಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗಾಗಿ 92 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರು.
ಇದನ್ನು ಓದಿ: ದೇಶದೆಲ್ಲೆಡೆ ಬೀದಿನಾಯಿಗಳ ಹಾವಳಿ: ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್
ಈಗ ಪ್ರತಿಮೆ ಸಿದ್ಧವಾಗಿದೆ. ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ಇದುವರೆಗೂ ಪ್ರತಿಮೆ ಅನಾವರಣ ಮಾಡಲು ಮನಸ್ಸು ಮಾಡುತ್ತಿಲ್ಲ. ನವೆಂಬರ್.1ರೊಳಗೆ ಅರಸು ಅವರ ಪ್ರತಿಮೆ ಅನಾವರಣ ಮಾಡಬೇಕು. ಇಲ್ಲದಿದ್ದರೇ ನಾವೇ ಪ್ರತಿಮೆ ಅನಾವರಣ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.





