ಮೈಸೂರು ನಗರ

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿ: ಮೈಸೂರು| ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣ

ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ. ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

8 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago