ಮಂಡ್ಯ : ನಾನು ಸಿಎಂ ಆಗಿದ್ದಾಗಲೇ ಚನ್ನಪಪಟ್ಟಣದ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿದೆ ಎಂದು ಡಿ.ಕೆ.ಶಿವಕುಮಾರ್ ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ.
ನಗರದಲ್ಲಿ ಚನ್ನಪಟ್ಟಣವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಹತ್ತು ದಿನಗಳಿಂದ ಚನ್ನಪಟ್ಟಣಕ್ಕೆ ಹೋಗಿ ಡಿಕೆಶಿ ನೀಡುತ್ತಿರುವ ಹೇಳಿಕೆಗಳನ್ನ ಗಮನಿಸಿದ್ದೇನೆ. ಸತ್ಯಗಾಲ ಮತ್ತು ಸಣ್ಣ ನೀರಾವರಿ ಯೋಜನೆಗಳ ಬಗ್ಗೆ ಅವರು ಮಾತನಾಡಿದ್ದಾರೆ. ಅದು ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಬಂದ ಯೋಜನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಶೇಕಡ ೯೦ ರಷ್ಟು ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಮತ್ತು ಶಾಲೆಗಳಿಗೂ ಕಾಯಕಲ್ಪ ನೀಡಲಾಗಿದೆ. ನಗರದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕೂಡ ಕಂಡುಕೊಳ್ಳಲಾಗಿದೆ. ಮನೆಗಳು ನೀಡದಿರುವ ಬಗ್ಗೆ ಮಾತನಾಡುತ್ತಾರೆ. ಶಾಸಕನಾಗಿ ತಾನು ಮನೆಗಳನ್ನ ನೀಡಲು ಸಾಧ್ಯವೇ. ಅದು ಸರ್ಕಾರದ ಕೆಲಸ ಎಂದು ಲೇವಡಿ ಮಾಡಿದರು.
ಅಲ್ಲದೆ ಹಿಂದೆ ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ಸಿಎಂ ಆಗಿದ್ದಾಗ ವಸತಿ ಯೋಜನೆಗಾಗಿ ೨೮೦೦೦ ಕೋಟಿ ಬಿಡುಗಡೆ ಮಾಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಯೋಜನೆಗಳನ್ನ ಕಾರ್ಯಗತಗೊಳಿಸಲಿಲ್ಲ ಎಂದು ಹೇಳಿದರು.
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ…
ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್…