ಮೈಸೂರು: ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮೈಸೂರಿನಲ್ಲಿಂದು ಭಕ್ತರು ಪ್ರತಿಭಟನೆ ನಡೆಸಿದರು.
ನಗರದ ಹಳೇ ಡೈರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಧರ್ಮಸ್ಥಳ ಭಕ್ತರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಫೋಟೋ ಹಿಡಿದು ಧರ್ಮಸ್ಥಳಕ್ಕೆ ಜೈ ಎಂದು ಜಯಘೋಷ ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಧರ್ಮಸ್ಥಳದಂತ ಪುಣ್ಯ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ವೀರೇಂದ್ರ ಹೆಗಡೆ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಹಿಂದೂ ದೇವಾಲಯದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು.





