ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 2ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ.
ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಇದೆ.
ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಕೆ ನೀಡುತ್ತಿದ್ದಾರೆ.
ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿಜಯಲಕ್ಷ್ಮೀ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ವಿವಿಧ ಹೂವು-ಹಣ್ಣುಗಳಿಂದ ಅಲಂಕಾರ ಮಾಡಲಾಗಿದ್ದು, ಇಂದು ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.
ಇನ್ನು ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ದರ್ಶನ, 300 ರೂಪಾಯಿ ದರ್ಶನ ಹಾಗೂ 2000 ರೂಪಾಯಿ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನು ಚಾಮುಂಡಿಬೆಟ್ಟದ ಪ್ರಾಧಿಕಾರದ ವತಿಯಿಂದಲೇ ದರ್ಶನಕ್ಕೆ ಬಂದ ಭಕ್ತರಿಗೆ ಚಿಕ್ಕ ಡ್ರೈಫ್ರೂಟ್ಸ್ ಪ್ಯಾಕೆಟ್ ನೀಡಲಾಗುತ್ತದೆ. ಜೊತೆಗೆ ವಿಶೇಷ ದರ್ಶನಕ್ಕೆ ಹಣ ನೀಡಿ ರಶೀದಿ ಪಡೆದವರಿಗೆ ವಿಶೇಷ ದರ್ಶನದ ಜೊತೆಗೆ ಅರಿಶಿನ, ಕುಂಕುಮ ಹಾಗೂ ಇತರ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಜೊತೆಗೆ ಚಾಮುಂಡೇಶ್ವರಿ ದೇವಾಲಯದ ಒಳಭಾಗದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ದೇವಾಲಯದ ಉತ್ಸವ, ಗರ್ಭಗುಡಿ ಹಾಗೂ ಇತರ ಭಾಗಗಳಲ್ಲಿ ಮೊಬೈಲ್‌ನಲ್ಲಿ ಫೋಟೋ ತೆಗೆಯುವುದು ಹಾಗೂ ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ.
ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭಕ್ತರಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…