Public access prohibited
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ತಾವರೆಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ದರ್ಶನ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 7.30ರಿಂದ 2 ಗಂಟೆಯವರೆಗೆ ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ನಂತರ ರಾತ್ರಿ 8.30ರಿಂದ ಮುಂದುವರಿದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಈ ಸಂಬಂಧ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆ ಬಿಡುಗಡೆ ಮಾಡಿ, ರಾಷ್ಟ್ರಪತಿಯವರ ಆಗಮನ ಸಂದರ್ಭದಲ್ಲಿ ಭದ್ರತಾ ಕ್ರಮಗಳ ಭಾಗವಾಗಿ ವಿಧಿಸಿರುವ ನಿಬಂಧನೆಗಳಿಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…