ಮೈಸೂರು ನಗರ

ಧರ್ಮಸ್ಥಳ ತಲೆಬುರುಡೆ ಪ್ರಕರಣ: ಸದ್ಯಕ್ಕಿಲ್ಲ ಎಸ್‌ಐಟಿ ರಚನೆ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳ ಅಪರಿಚಿತ ಶವಗಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳಿದರೂ ಅಂತಾ ಎಸ್‌ಐಟಿ ರಚನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರು ಅಂತ ಕಾರಣಕ್ಕೆ ದಿಢೀರ್ ಎಸ್‌ಐಟಿ ಮಾಡಲು ಆಗುವುದಿಲ್ಲ.
ಎತ್ತು ಮರಿ ಹಾಕಿತ್ತು ಅಂತ ಹೇಳಿ ಕೊಟ್ಟಿಗೆ ರೆಡಿ ಮಾಡಲು ಸಾಧ್ಯನಾ ಎಂದು ಪ್ರಶ್ನೆ ಮಾಡಿದ ಅವರು, ಇದು ಅದೇ ರೀತಿ. ಒಬ್ಬ ವ್ಯಕ್ತಿ ಬಂದು ಸ್ವಇಚ್ಛೆಯಿಂದ ಹೇಳಿಕೆ ಕೊಟ್ಟಿದ್ದಾನೆ. ನಾನು ಧರ್ಮಸ್ಥಳದಲ್ಲಿ ಎಷ್ಟೋ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಪೊಲೀಸರು ಏನು ವರದಿ ಕೊಡುತ್ತಾರೆ ನೋಡೋಣಾ.
ಆ ವರದಿ ಆಧಾರದ ಮೇಲೆ ನಾವು ಮುಂದಿನ ಕ್ರಮ ಹೇಳುತ್ತೇವೆ. ಈಗಲೇ ಯಾರೋ ಹೇಳಿದರು ಎಂದು ಏನೇನೊ ಘೋಷಣೆ ಮಾಡಲು ಸಾಧ್ಯವಿಲ್ಲ. ಧರ್ಮಸ್ಥಳದ ಪ್ರಕರಣದಲ್ಲಿ ನಮ್ಮ ಮೇಲೆ ಯಾರ ಒತ್ತಡ ಇಲ್ಲ. ಒತ್ತಡ ಬಂದರೂ ನಾವು ಅದಕ್ಕೆ ಬಗ್ಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಆರ್‌ಸಿಬಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ನಾ ಅವರು ವರದಿ ಕೊಟ್ಟಿದ್ದಾರೆ. ಆ ವರದಿ ಸಂಪುಟದಲ್ಲಿ ಮಂಡನೆಯಾಗಿದೆ. ಆದರೆ ಈ ಬಗ್ಗೆ ಚರ್ಚೆ ಆಗಿಲ್ಲ. ಆ ವರದಿಯ ಮುಖ್ಯ ಅಂಶಗಳನ್ನು ಸಚಿವರಿಗೆ ಕೊಟ್ಟಿದ್ದೇವೆ. ಮುಂದಿನ ಸಭೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ‌ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

10 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

34 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

42 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago