ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್.1ರಂದು ಹಮ್ಮಿಕೊಂಡಿರುವ ಧರ್ಮಸ್ಥಳ ಚಲೋದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಭಕ್ತಾಧಿಗಳು ಸೇರುವ ಸಾಧ್ಯತೆಯಿದೆ.
ಧರ್ಮಸ್ಥಳದಲ್ಲಿ ಧರ್ಮ ಸಭೆ ಹೆಸರಿನಲ್ಲಿ ಬಿಜೆಪಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಎಲ್ಲಾ ಶಾಸಕರು, ಹಾಗೂ ಗಣ್ಯರು ಭಾಗಿಯಾಗಲಿದ್ದಾರೆ. ಮೈಸೂರಿನ ಪ್ರತಿ ಕ್ಷೇತ್ರದಿಂದ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಒಟ್ಟಾರೆ ಮೈಸೂರು ನಗರದಿಂದ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಧರ್ಮಸ್ಥಳಕ್ಕೆ ತೆರಳುತ್ತಾರೆ. ಆಗಸ್ಟ್.31ರಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.





