ಮೈಸೂರು ನಗರ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ: ಎಲ್.ನಾಗೇಂದ್ರ

ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್.1ರಂದು ಹಮ್ಮಿಕೊಂಡಿರುವ ಧರ್ಮಸ್ಥಳ ಚಲೋ‌ದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಭಕ್ತಾಧಿಗಳು ಸೇರುವ ಸಾಧ್ಯತೆಯಿದೆ.

ಧರ್ಮಸ್ಥಳದಲ್ಲಿ ಧರ್ಮ ಸಭೆ ಹೆಸರಿನಲ್ಲಿ ಬಿಜೆಪಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಎಲ್ಲಾ ಶಾಸಕರು, ಹಾಗೂ ಗಣ್ಯರು ಭಾಗಿಯಾಗಲಿದ್ದಾರೆ. ಮೈಸೂರಿನ ಪ್ರತಿ ಕ್ಷೇತ್ರದಿಂದ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಒಟ್ಟಾರೆ ಮೈಸೂರು ನಗರದಿಂದ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಧರ್ಮಸ್ಥಳಕ್ಕೆ ತೆರಳುತ್ತಾರೆ. ಆಗಸ್ಟ್.31ರಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago