ಮೈಸೂರು ನಗರ

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ ನಾಗರಿಕ ದಂಪತಿ ೧ ಕೋಟಿ ೫೦ ಸಾವಿರ ರೂ. ಕಳೆದುಕೊಂಡಿದ್ದು, ಈ ಸಂಬಂಧ ನಗರದ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.೨ರಂದು ವಾಟ್ಸಾಪ್ ಕರೆ ಮಾಡಿ, ಟ್ರಾಯ್‌ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ ಸೈಬರ್ ವಂಚಕರು, ನಿಮ್ಮ ಆಧಾರ್ ದುರುಪಯೋಗವಾಗಿದೆ ಎಂದು ಬೆದರಿಸಿದ್ದಾರೆ. ಅಲ್ಲದೆ, ಕರೆಯನ್ನು ಮುಂಬೈ ಸೈಬರ್ ಬ್ರಾಂಚ್‌ಗೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ವಾಟ್ಸಾಪ್‌ನಲ್ಲಿ ವಿಡಿಯೋ ಕರೆ ಮಾಡಿದ ವಂಚಕರು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದು, ನಿಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಬೇಕು. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣವನ್ನು ನಮಗೆ ವರ್ಗಾಯಿಸಬೇಕೆಂದು ಸೂಚನೆ ನೀಡಿದ್ದಾರೆ.

ಇದನ್ನು ನಂಬಿದ ದಂಪತಿ, ತಮ್ಮ ಬ್ಯಾಂಕ್ ಖಾತೆಯಿಂದ ೪೦ ಲಕ್ಷ ರೂ. ಮತ್ತು ಅವರ ಪತ್ನಿ ಖಾತೆಯಿಂದ ೬೦,೫೦,೦೦೦ ರೂ. ಹಣವನ್ನು ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗೆ ಕಳುಹಿಸಿದ್ದಾರೆ. ವಂಚಕರು ಹೇಳಿದಂತೆ ಮೂರು ದಿನಗಳಾದರೂ ವಾಪಸ್ ತಮ್ಮ ಖಾತೆಗೆ ಹಣ ಬಾರದಿದ್ದಾಗ ವಂಚನೆಗೆ ಒಳಗಾಗಿರು ವುದು ಮನವರಿಕೆಯಾಗಿದೆ. ಈ ಸಂಬಂಧ ಮೋಸ ಹೋದ ದಂಪತಿ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

3 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

3 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

3 hours ago