K.B. Ganapathy
ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಇಂದು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ ಅವರು ಮೂಲತಃ ಪಕ್ಕದ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲವಾಗಿದ್ದರು. ಕೆಬಿ ಗಣಪತಿಯವರ ಗರಡಿಯಲ್ಲಿ ಅನೇಕ ಪ್ರಭಾವಿ ಪತ್ರಕರ್ತರು ಬೆಳೆದಿದ್ದಾರೆ.
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹಲವಾರು ಜನಪ್ರತಿನಿಧಿಗಳು ಹಾಗೂ ಪತ್ರಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯವರಗೆ ಕೆ.ಬಿ.ಗಣಪತಿ ಅವರ ಮೈಸೂರಿನ ಜೆ.ಸಿ.ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಅಂತಿಮ ಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…