ಮೈಸೂರು ನಗರ

ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ನಿಧನಕ್ಕೆ ಗಣ್ಯರ ಸಂತಾಪ

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಇಂದು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ ಅವರು ಮೂಲತಃ ಪಕ್ಕದ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲವಾಗಿದ್ದರು. ಕೆಬಿ ಗಣಪತಿಯವರ ಗರಡಿಯಲ್ಲಿ ಅನೇಕ ಪ್ರಭಾವಿ ಪತ್ರಕರ್ತರು ಬೆಳೆದಿದ್ದಾರೆ.

ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹಲವಾರು ಜನಪ್ರತಿನಿಧಿಗಳು ಹಾಗೂ ಪತ್ರಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಯವರಗೆ ಕೆ.ಬಿ.ಗಣಪತಿ ಅವರ ಮೈಸೂರಿನ ಜೆ.ಸಿ.ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಅಂತಿಮ ಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

8 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

13 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

14 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

15 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

17 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

22 hours ago