ಮೈಸೂರು: ಕಳೆದ ಕೆಲ ದಿನಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಭಾರೀ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ನಡೆದ ದಿಶಾ ಸಭೆಗೂ ಗೈರಾಗುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇಂದು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ ಆಯೋಜನೆ ಮಾಡಲಾಗಿತ್ತು. ಈ ಸಭೆಗೆ ಶಾಸಕ ಜಿ.ಟಿ.ದೇವೇಗೌಡ ಗೈರಾಗಿದ್ದು, ಎಚ್‌ಡಿಕೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದರೆ ಅವರ ಪುತ್ರ ಹುಣಸೂರು ಶಾಸಕ ಜಿ.ಟಿ.ಹರೀಶ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.
ಇಂದಿನ ಸಭೆಯಲ್ಲಿ ಸಂಸದ ಯದುವೀರ್ ಒಡೆಯರ್, ಈ ಭಾಗದ ಶಾಸಕರು, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಜಿಟಿಡಿ ಹಾಗೂ ಜೆಡಿಎಸ್ ಪಕ್ಷದ ಸಂಬಂಧ ಒಂದು ತರಹ ಗಂಡ ಹೆಂಡತಿ ಸಂಬಂಧ ಇದ್ದಹಾಗೆ, ಎಲ್ಲವೂ ಸರಿಯಾಗುತ್ತದೆ. ಮುನಿಸು ಇದ್ದ ಮಾತ್ರಕ್ಕೆ ಅವರು ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದರ್ಥವಲ್ಲ ಎಂದು ಹೇಳಿದ್ದರು.
ಆದರೆ ಇಂದಿನ ಸಭೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಗೈರಾಗಿದ್ದಾರೆ. ಇತ್ತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಇಂದು ಸುದ್ದಿಗೋಷ್ಠಿ ನಡೆಸಿ ಜೆಡಿಎಸ್‌ನ ಹಲವು ಶಾಸಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿರುವುದು ಭಾರೀ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…