ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಪರವಾಗಿದ್ದಾರೆ. ಈಗಾಗಿ ಮೈಸೂರಿನಲ್ಲಿ ದಿಶಾ ಸಭೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ನನಗೂ ದಿಶಾ ಸಭೆಗೆ ಆಹ್ವಾನ ಇತ್ತು. ಕೃಷ್ಣೆ ಭೈರೇಗೌಡರ ಸಭೆಗೂ ಕೂಡ ಆಹ್ವಾನ ಇತ್ತು. ನಾನು ಬೇರೊಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿದ್ದೆ. ಈ ಕಾರಣಕ್ಕೆ ದಿಶಾ ಸಭೆಗೆ ಹೋಗಲು ಆಗಲಿಲ್ಲ. ಇದರಲ್ಲಿ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.





