ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು.
ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಇಂದು ಬೆಟ್ಟದ ಪಾದ ಬಳಿ ಶ್ರೀದುರ್ಗಾ ಫೌಂಡೇಶನ್ ಹಾಗೂ ಕೆವಿಕೆ ಫೌಂಡೇಶನ್ ವತಿಯಿಂದ ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು. ಸೀರೆ, ಕುಂಕುಮ, ಅರಿಶಿಣ, ಬಳೆ ನೀಡುವ ಮೂಲಕ ಪೌರ ಕಾರ್ಮಿಕರಿಗೆ ಶಕ್ತಿ ನೀಡಲಿ. ದೈವ ಸ್ವರೂಪಿಯಾದ ತೃತೀಯ ಲಿಂಗಿಗಳಿಗೆ ಒಳಿತಾಗಲಿ ಎಂದು ಹಾರೈಸಿದರು.





