ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ತಾಯಿಗೆ ವಿಶೇಷವಾದ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.
ಇನ್ನು ಆಷಾಢ ಶುಕ್ರವಾರ ಪ್ರಯುಕ್ತ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಸೇವಾ ಸಮಿತಿಯಿಂದ ವಿಶೇಷ ಪೂಜೆಗಾಗಿ ೨೫ ಸಾವಿರ ಮೈಸೂರು ಪಾಕ್ ತಯಾರಿಸಲಾಗಿದೆ. ಬೆಳಗ್ಗೆ ೬ ಗಂಟೆಯಿಂದ ಸಾಯಂಕಾಲ ೪ ಗಂಟೆವರೆಗೂ ಪ್ರಸಾದ ವಿನಿಯೋಗ ಮಾಡಲಾಗುತ್ತಿದೆ.
ಇನ್ನು ಈ ಮೈಸೂರು ಪಾಕ್ ಅನ್ನು ೪೦ ಜನ ಬಾಣಸಿಗರಿಂದ ತಯಾರಿಸಲಾಗಿದ್ದು, ಮೈಸೂರು ಪಾಕ್ ಗೆ ೨೦೦ ಕೆಜಿ ಕಡ್ಲೆಹಿಟ್ಟು, ೫೦೦ ಕೆಜಿ ಸಕ್ಕರೆ, ೩೦ ಲೀಟರ್ ಎಣ್ಣೆ, ೧೦೦ ಕೆಜಿ ತುಪ್ಪ, ೧೦೦ ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, ೩ ಕೆಜಿ ಏಲಕ್ಕಿ, ೨ ಕೆಜಿ ಅಡುಗೆ ಅರಿಶಿಣ ಬಳಸಲಾಗಿದೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…