Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೇಂದ್ರ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ರಾಮಸ್ವಾಮಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಂಧನ ಬೆಲೆ ಶೀಘ್ರದಲ್ಲಿ ಇಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಹೇಳಿದರು.

ಮೈಸೂರು ಜಿಲ್ಲಾ ಗ್ರಾಮಾಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಚಂದನ್‌ ಗೌಡ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸೂಚನೆ ಮೆರೆಗೆ ಸಾಂಕೇತಿಕವಾಗಿ ಪ್ರತಿಭಟಿಸಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ರೂಪದಲ್ಲಿ ಪ್ರತಿಭಟಿಸುವುದಾಗಿ ತಿಳಿಸಿದರು.

ರಾಜ್ಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ನಜ್ಮಾ ನಾಜೀರ್‌ ಮಾತನಾಡಿ, ನಿರುದ್ಯೋಗ ನಿವಾರಣೆ ಮಾಡುವುದಾಗಿ ಹೇಳಿ ಬಂದ ಪ್ರಧಾನಿ ನರೇಂದ್ರ ಮೋದಿಯವರು ಈಗ ಪಕೋಡ ಮಾರಿ ಎಂದಿದ್ದಾರೆ. ಆದರೆ, ಪಕೋಡ ಮಾರಲು ಅಡುಗೆ ಎಣ್ಣೆ ಹಾಗೂ ಅನಿಲ ದರವನ್ನು ಏರಿಸುವ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ. ಹೀಗಾಗಿ, ಕೇಂದ್ರ ಬಿಜೆಪಿ ಸರ್ಕಾರ ಉದ್ಯೋಗ ಕೊಡುವಲ್ಲಿ ವಿಫಲವಾಗಿ ಎಲ್ಲಾ ರೀತಿಯ ಬೆಲೆ ಏರಿಕೆ ಮಾಡಿದ್ದಾರೆ ಎಂದು ಹೇಳಿದರು.

ನರಸೀಪುರ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯು.ಎಸ್.ಶಶಾಂಕ್ ಗೌಡ, ಮಂಜುನಾಥ್ ಗೌಡ, ಅಕ್ಷತಾ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!