ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ರಾಮಸ್ವಾಮಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಂಧನ ಬೆಲೆ ಶೀಘ್ರದಲ್ಲಿ ಇಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಹೇಳಿದರು.
ಮೈಸೂರು ಜಿಲ್ಲಾ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ಮಾತನಾಡಿ, ರಾಜ್ಯ ಕಾಂಗ್ರೆಸ್ ಸೂಚನೆ ಮೆರೆಗೆ ಸಾಂಕೇತಿಕವಾಗಿ ಪ್ರತಿಭಟಿಸಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ರೂಪದಲ್ಲಿ ಪ್ರತಿಭಟಿಸುವುದಾಗಿ ತಿಳಿಸಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಜ್ಮಾ ನಾಜೀರ್ ಮಾತನಾಡಿ, ನಿರುದ್ಯೋಗ ನಿವಾರಣೆ ಮಾಡುವುದಾಗಿ ಹೇಳಿ ಬಂದ ಪ್ರಧಾನಿ ನರೇಂದ್ರ ಮೋದಿಯವರು ಈಗ ಪಕೋಡ ಮಾರಿ ಎಂದಿದ್ದಾರೆ. ಆದರೆ, ಪಕೋಡ ಮಾರಲು ಅಡುಗೆ ಎಣ್ಣೆ ಹಾಗೂ ಅನಿಲ ದರವನ್ನು ಏರಿಸುವ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ. ಹೀಗಾಗಿ, ಕೇಂದ್ರ ಬಿಜೆಪಿ ಸರ್ಕಾರ ಉದ್ಯೋಗ ಕೊಡುವಲ್ಲಿ ವಿಫಲವಾಗಿ ಎಲ್ಲಾ ರೀತಿಯ ಬೆಲೆ ಏರಿಕೆ ಮಾಡಿದ್ದಾರೆ ಎಂದು ಹೇಳಿದರು.
ನರಸೀಪುರ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯು.ಎಸ್.ಶಶಾಂಕ್ ಗೌಡ, ಮಂಜುನಾಥ್ ಗೌಡ, ಅಕ್ಷತಾ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ…
ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ…
ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಂದಿನ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ(ಬಿ.ಆರ್ ಗವಾಯಿ) ಹೆಸರನ್ನು ನ್ಯಾ.ಸಂಜಿವ್ ಖನ್ನಾ ಅವರು…
ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ…
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ…
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister…