yaduveer
ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು
ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.
ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ.
ಡಿಕೆಶಿ ಅವರು ಆರ್‌ಎಸ್‌ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ ಡ್ರಗ್ಸ್ ಪ್ರಕರಣ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…