ಮೈಸೂರು ನಗರ

ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆ ಹಾಸ್ಪಾಸ್ಪದ: ಸಂಸದ ಯದುವೀರ್ ಒಡೆಯರ್‌

ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ‌ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು

ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.

ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದ ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟಾಗಿದೆ.

ಡಿಕೆಶಿ ಅವರು ಆರ್‌ಎಸ್‌ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ‌ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ‌ ಹಿಂದೆ ಡ್ರಗ್ಸ್ ಪ್ರಕರಣ‌ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು‌ ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

4 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

10 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

10 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

11 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

11 hours ago