ಕೆ.ಬಿ.ರಮೇಶ್ ನಾಯಕ
ಮೈಸೂರು: ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ನಿತ್ಯ ಸಂಜೆ ಆರು ಗಂಟೆಯಿಂದ ಬೆಳಿಗ್ಗೆವರೆಗೆ ನೀರಾವರಿ ಫೀಡರ್‌ಗಳ ಮೂಲಕ ತೋಟದ ಮನೆಗಳ ಗೃಹ ಬಳಕೆಗೆ ಹಾಗೂ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳಿಗಾಗಿ ಸಿಂಗಲ್ ಫೇಸ್ ವಿದ್ಯುತ್ತನ್ನು ಓಪನ್ ಡೆಲ್ಟ ಮೂಲಕ ನೀಡಲಾಗುತ್ತಿದೆ. ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್‌ಗಳನ್ನು ಬಳಸಬಾರದು ಎಂದು ರೈತರಿಗೆ ಮನವಿ ಮಾಡಲಾಗುತ್ತಿದೆ. ಹೀಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸುವಾಗ ಕೆಲವರು ಕೃಷಿ ಪಂಪ್‌ಸೆಟ್‌ಗಳನ್ನು ನೀರಾವರಿ ಫೀಡರ್ ಮೂಲಕ ಬಳಸುತ್ತಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕಾಡಂಚಿನ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್ ಬಳಸದಂತೆ ಮನವಿ ಮಾಡಲಾಗಿದೆ. ಒಂದು ವೇಳೆ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್‌ನಲ್ಲಿ ಪಂಪ್‌ಸೆಟ್‌ಗಳು ಚಾಲನೆ ಮಾಡಿ ಫೀಡರ್ ಟ್ರಿಪ್ ಆಗುವುದರಿಂದ ವಿದ್ಯುತ್ ವ್ಯತ್ಯಯವಾದಲ್ಲಿ ನಿಗಮವು ಜವಾಬ್ದಾರಿಯಾಗಿರುವುದಿಲ್ಲ. ಆದ್ದರಿಂದ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್‌ನಲ್ಲಿ ಪಂಪ್‌ಸೆಟ್‌ಗಳನ್ನು ಚಾಲನೆಗೊಳಿಸಬಾರದು ಎಂದು ರೈತರಿಗೆ ಮನವಿ ಮಾಡಿದೆ.
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…