mahesh (1)
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ ಸಂಜೆಯೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ. ಸಿದ್ದರಾಮಯ್ಯ ಸುತ್ತಮುತ್ತ ಇರುವ ಡೋಂಗಿಗಳನ್ನು ಮೆಚ್ಚಿಸುವ ಸಲುವಾಗಿ ದಸರಾ ಉದ್ಘಾಟನೆ ಮಾಡಲು ಬಾನು ಮುಷ್ತಾಕ್‌ರನ್ನು ಆಯ್ಕೆ ಮಾಡಿದ್ದೀರಾ? ಇಡೀ ದಸರಾ ಧಾರ್ಮಿಕ ಪರಂಪರೆಗೆ ಅನುಸಾರವಾಗಿ ನಡೆಯುತ್ತದೆ. ನಮಗೆ ಬಾನು ಮುಷ್ತಾಕ್ ಮೇಲೆ ದ್ವೇಷವಿಲ್ಲ. ಆದರೆ ಬಾನು ಮುಷ್ತಾಕ್ ಅರಿಶಿನ ಕುಂಕುಮದ ಬಣ್ಣವನ್ನು ಟೀಕೆ ಮಾಡಿದ್ದಾರೆ. ಅಲ್ಲದೇ ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಈ ವಿಚಾರದಲ್ಲಿ ಅಗತ್ಯ ಬಿದ್ದರೆ ಹೋರಾಟ, ಬಲಿದಾನಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…