ಮೈಸೂರು: ಈ ಬಾರಿ ವಿಜೃಂಭಣೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ಕೊಡಿ, ಯಾವುದೇ ಅನವಶ್ಯಕ ನಿರ್ಬಂಧ ಹೇರಬೇಡಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಗೆ ಅನವಶ್ಯಕ ನಿರ್ಬಂಧ ಹೇರಬಾರದು. ನಮ್ಮ ಹಬ್ಬ ನಮ್ಮ ನಂಬಿಕೆ. ಹಾಗಾಗಿ ಹಬ್ಬ ಆಚರಣೆಗೆ ಯಾವುದೇ ನಿರ್ಬಂಧ ಹಾಕಬಾರದು. ಎಲ್ಲದಕ್ಕೂ ಅನುಮತಿ ಪಡೆಯಬೇಕು ಎಂಬ ಕಟ್ಟಾಜ್ಞೆ ಬೇಡ. ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ತೆಗೆದುಕೊಳ್ಳಬಾರದು. ಅದಕ್ಕೆ ಅನುಮತಿ ಪಡೆದು ಹಬ್ಬ ಆಚರಿಸಿ. ಪೊಲೀಸರು ಯಾವುದಾದರೂ ಸಮಸ್ಯೆ ಒಡ್ಡಿದರೆ ಜನರ ಪರವಾಗಿ ನಾನೇ ನಿಲ್ಲುತ್ತೇನೆ. ಬೇರೆಯವರಿಗಿಲ್ಲದ ನಿರ್ಬಂಧ ನಮಗೇಕೆ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗೌರಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಿಧಿಸಿರುವ ನಿರ್ಬಂಧಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಸಂಜೆ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾಹಿತಿ ನೀಡಿದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…