Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಬಿ-ಖಾತಾ ಅಭಿಯಾನಕ್ಕೆ ಚಾಲನೆ ನೀಡಿದ ಡಾ.ಹೆಚ್‌.ಸಿ.ಮಹದೇವಪ್ಪ

ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಲ್ಲದೇ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ಹೇಳಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ತನ್ವೀರ್‌ ಸೇಠ್‌, ಕೆ. ಹರೀಶ್‌ ಗೌಡ, ಶ್ರೀವತ್ಸ, ವಿಧಾನ ಪರಿಷತ್‌ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್‌.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್‌ ಖಾನ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!