ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಲ್ಲದೇ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ಹೇಳಿದರು.
ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…