ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, 3.14 ಗ್ರಾಂ ಎಂಡಿಎಂಎ, 580 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂದ ಐವರನ್ನು ಬಂಧಿಸಲಾಗಿದೆ.
ನಗರದ ಮಂಡಿ ಪೊಲೀಸ್ ಠಾಣಾ ಹಾಗೂ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ ಮೇಲೆ ಕಣ್ಣಿಟ್ಟಿದ್ದ ಪೊಲೀಸರು, ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಲ್ಯಾಣಗಿರಿನಗರದ ಮೊಹಮ್ಮದ್ ಕರೀಂ ಹಾಗೂ ನಿಷಾದ್ ಪಾಷ ಎಂಬವರನ್ನು ಬಂಧಿಸಿದ್ದಾರೆ.
ಜೊತೆಗೆ ಸಿಸಿಬಿ ಪೊಲೀಸರು ಮಂಡಿ ಹಾಗೂ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 35 ಗ್ರಾಂ ಮತ್ತು 559 ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಗಳಾದ ಬಂಬೂ ಬಜಾರ್‌ನ ಸಂಜಯ್, ಹಾಗೂ ರಾಜ್‌ಕುಮಾರ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಲು ಉಪಯೋಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ರಾಜೀವ್‌ನಗರ ನಿವಾಸಿ ಮೊಹಮ್ಮದ್ ಅಫಾಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮೈಸೂರು ನಗರದಲ್ಲಿ ಮಾದಕ ವಸ್ತು ಮಾರಾಟ, ಸಾಗಾಟ ಹಾಗೂ ಸೇವನೆ ಮಾಡುವವರ ಮೇಲೆ ನಗರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗಿಬರುವ - ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ನಂದಿನಿಯ ಬಾದಾಮಿ ಹಾಲು, ಮಜ್ಜಿಗೆ, ಲಸ್ಸಿ…
ತಮ್ಮ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಮುಷ್ಕರ ಮುಂದುವರಿಸಿರುವುದು…
ರೈತರು ತಮ್ಮ ಹೊಲಗದ್ದೆ ಹಾಗೂ ತೋಟಗಳಲ್ಲಿ ಕೃಷಿ ಕಾರ್ಯಕ್ಕೆ ತೆರಳುವಾಗ ಇಲ್ಲವೇ ಮನೆಗೆ ಮರಳುವಾಗ ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.…
ಕೆ.ವಿ.ಮಲ್ಲೇಶ್ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಅನಿಕೇತನ ಸೇವಾ ಟ್ರಸ್ಟ್, ಅಧ್ಯಕ್ಷ ಹೊಸತನದ ನಿರಂತರ ಹರಿವಿಗೆ ಮುಖ್ಯಮಂತ್ರಿ…
ನವೀನ್ ಡಿಸೋಜ ಡಿ.೨೧ರಿಂದ ಮಡಿಕೇರಿಯಲ್ಲಿ ೪ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್; ನ.೨೭ರಂದು ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಮಡಿಕೇರಿ: ಕೊಡಗು…
ಹೆಚ್.ಡಿ.ಮಣಿಕಂಠನಾಯಕ ಖರೀದಿ ಪ್ರಕ್ರಿಯೆ ಸರಳಗೊಳಿಸಿದ ಕೇಂದ್ರ ಸರ್ಕಾರ; ಡಿ.೧ರಿಂದ ಯಳಂದೂರು ತಾಲ್ಲೂಕಿನಲ್ಲಿ ಜಾರಿ ಯಳಂದೂರು: ರಸಗೊಬ್ಬರ ಖರೀದಿಗಾಗಿ ಅಂಗಡಿಗಳ ಮುಂದೆ…