ಮೈಸೂರು ನಗರ

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್‌ ಮುಕ್ತ ನಗರಕ್ಕೆ ಪಣ ತೊಟ್ಟಿರುವ ಮೈಸೂರು ಪೊಲೀಸರು ನಗರದ ವಿವಿಧೆಡೆ ದೀಢಿರ್‌ ದಾಳಿ ನಡೆಸುತ್ತಿದ್ದಾರೆ. ಎಂದಿನಂತೆ ಬುಧವಾರ ಸಹ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ.

ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್‌ ಬಕ್ಸ್‌ ಕೆಫೆ ಬಳಿ ಅಮೀರ್‌ ಖಾನ್‌, ಸೈಯದ್‌ ಇಮ್ರಾನ್‌, ಮಹಮ್ಮದ್‌ ನಬೀಲ್‌ ಎಂಬಾತನನ್ನು ಬಂಧಿಸಿ ಸುಮಾರು 1.20 ಲಕ್ಷ ರೂ. ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೂರು ಆರೋಪಿಗಳ ಪೈಕಿ ಆರೋಪಿ ಅಮೀರ್ ಖಾನ್ ಈತನ ವಿರುದ್ಧ ಈ ಹಿಂದೆ ಕೂಡ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ. ಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

2 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

3 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

3 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

3 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

3 hours ago