ಮೈಸೂರು: ಏಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್ ಜಯಂತಿಯಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ನಿನ್ನೆ ಸಚಿವ ಎಚ್.ಸಿ.ಮಹದೇವಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆ ಮಧ್ಯದಲ್ಲೇ ತಡೆದು ಬಂಧಿಸಿದರು. ಈ ಘಟನೆಯಿಂದ ರೊಚ್ಚಿಗೆದ್ದಿರುವ ದಸಂಸ ಕಾರ್ಯಕರ್ತರು, ಸಚಿವ ಮಹದೇವಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ತಡೆದು ಬಂಧಿಸುವಂತೆ ಮಾಡಿದ್ದು, ಸಚಿವ ಮಹದೇವಪ್ಪ ರಾಜಕೀಯ ಜೀವನದ ಕಪ್ಪುಚುಕ್ಕೆ. ಎಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಪುನರಾರಂಭಿಸಬೇಕು. ಇಲ್ಲವಾದಲ್ಲಿ ಸಚಿವರಿಗೆ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ. ನಿಮ್ಮ ದಲಿತ ವಿರೋಧಿತನವನ್ನು ಕರಪತ್ರ ಮಾಡಿ ಹಂಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…