ಮೈಸೂರು: ರಾಜ್ಯದ ಪ್ರಗತಿಪರ ಚಿಂತಕರು, ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಅಂಬೇಡ್ಕರ್ ಸಂಘಟನೆಗಳ ಸಹಯೋಗದೊಂದಿಗೆ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನು ಓದಿ: ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ ಅರ್ಜುನ್ ಜನ್ಯ ಸಂಗೀತ
ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿರುವ ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಹಿಷನ ಪ್ರತಿಮೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾರ್ಪಲ್‌ನಲ್ಲಿ ಮಹಿಷನ ಪ್ರತಿಮೆ ಮುಚ್ಚಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ.





