Mysore
24
scattered clouds

Social Media

ಗುರುವಾರ, 22 ಜನವರಿ 2026
Light
Dark

ನಾಳೆಯಿಂದ ಅಕ್ಟೋಬರ್.‌7ರವರೆಗೆ ದಸರಾ ರಜೆ

ಮೈಸೂರು: ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ ನಾಳೆಯಿಂದ ದಸರಾ ರಜೆ ಆರಂಭವಾಗಲಿದೆ.

ಈ ರಜೆಯು ಅಕ್ಟೋಬರ್.‌7ರವರೆಗೆ ಇರಲಿದ್ದು, ಒಟ್ಟು 18 ದಿನಗಳವರೆಗೆ ಇರಲಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ರಜೆಗಳು ಹಾಗೂ ಶಾಲಾ ಚಟುವಟಿಕೆಗಳ ಸಂಪೂರ್ಣ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ದಸರಾ ರಜೆಯು ನಾಳೆಯಿಂದ ಅಕ್ಟೋಬರ್.‌7ರವರೆಗೆ ಇರಲಿದ್ದು, ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯ ಸಮಯದಲ್ಲಿ ಮಕ್ಕಳು ತಮ್ಮ ಕುಟುಂಬದೊಂದಿಗೆ ದಸರಾ ಆಚರಣೆಯಲ್ಲಿ ಭಾಗವಹಿಸಲು ರಾಜ್ಯದ ವಿವಿಧ ದಸರಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿರುತ್ತದೆ.

ಇನ್ನು ಈ ರಜೆಯ ಅವಧಿಯಲ್ಲಿ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿ ರಜೆಗಳನ್ನು ಸಹ ಒಳಗೊಂಡಿದ್ದು, ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಿಗೆ ವಿರಾಮ ಸಿಗಲಿದೆ.

Tags:
error: Content is protected !!