ಮೈಸೂರು: ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ ನಾಳೆಯಿಂದ ದಸರಾ ರಜೆ ಆರಂಭವಾಗಲಿದೆ.
ಈ ರಜೆಯು ಅಕ್ಟೋಬರ್.7ರವರೆಗೆ ಇರಲಿದ್ದು, ಒಟ್ಟು 18 ದಿನಗಳವರೆಗೆ ಇರಲಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ರಜೆಗಳು ಹಾಗೂ ಶಾಲಾ ಚಟುವಟಿಕೆಗಳ ಸಂಪೂರ್ಣ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.
ದಸರಾ ರಜೆಯು ನಾಳೆಯಿಂದ ಅಕ್ಟೋಬರ್.7ರವರೆಗೆ ಇರಲಿದ್ದು, ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯ ಸಮಯದಲ್ಲಿ ಮಕ್ಕಳು ತಮ್ಮ ಕುಟುಂಬದೊಂದಿಗೆ ದಸರಾ ಆಚರಣೆಯಲ್ಲಿ ಭಾಗವಹಿಸಲು ರಾಜ್ಯದ ವಿವಿಧ ದಸರಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿರುತ್ತದೆ.
ಇನ್ನು ಈ ರಜೆಯ ಅವಧಿಯಲ್ಲಿ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿ ರಜೆಗಳನ್ನು ಸಹ ಒಳಗೊಂಡಿದ್ದು, ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಿಗೆ ವಿರಾಮ ಸಿಗಲಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…