ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಮುಡಾದಲ್ಲಿದ್ದ ಅಧಿಕಾರಿಗಳು ಇಡಿ ಅಧಿಕಾರಿಗಳು ಬೆದರಿಸಿ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಮುಡಾ ಕಚೇರಿಯ ಮೇಲೆ ಇಡಿ ದಾಳಿ ಮಾಡಿ, ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಲೋಕಾಯುಕ್ತ ಮತ್ತು ನ್ಯಾಯಾಧೀಶರ ತನಿಖಾ ತಂಡ ತನಿಖೆ ಮಾಡುವ ಹಂತದಲ್ಲೇ ಇಡಿ ಎಂಟ್ರಿಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಸಿಎಂ ಸಿದ್ದರಾಮಯ್ಯರನ್ನು ಬೆದರಿಸುವ ಕೆಲಸ. ಇಡಿ ಅಧಿಕಾರಿಗಳ ನಡೆಯ ಬಗ್ಗೆ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.





