ಮೈಸೂರು: ಗ್ಯಾರಂಟಿ ಯೋಜನೆಗಳಿಂದ ಬಡವರ, ಮಹಿಳೆಯರ ಆರ್ಥಿಕ, ಆಹಾರ ಭದ್ರತೆಯ ಕ್ರಾಂತಿಯಾಗಿದೆ ಎಂದು ಬಿಜೆಪಿ ನಾಯಕರ ವಿರೋಧಕ್ಕೆ ಕಾಂಗ್ರೆಸ್‌ನ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕ್ ಅವರು ಸದನದಲ್ಲಿ ಕುಳಿತು ಸುಮ್ಮನೆ ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲ. ಜನ ಸಾಮಾನ್ಯರ ಹತ್ತಿರ ಬಂದು ನೋಡಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತಿದೆ. ಆರ್ಥಿಕ, ಸಾಮಾಜಿಕ, ಧಾರ್ಮಿಕ ಸಬಲೀಕರಣ ಆಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ನೀಡುವ 2 ಸಾವಿರ ರೂಪಾಯಿಗಳು ಅವಳ ಆರೋಗ್ಯ ನೋಡಿಕೊಳ್ಳಲು ಉಪಯೋಗವಾಗಿದೆ. ಈ ಯೋಜನೆಗಳಿಂದ ಆರ್ಥಿಕ ಭದ್ರತೆ, ಆಹಾರ ಭದ್ರತೆ ಸಿಕ್ಕಿದೆ ಎಂದು ತಿಳಿಸಿದರು.
ಪ್ರತಿಯೊಬ್ಬ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಅನುಕೂಲವಾಗಬೇಕೆಂದರೆ ಗ್ಯಾರಂಟಿ ಸಮಿತಿ ಬೇಕೆ ಬೇಕು. ಗ್ಯಾರಂಟಿ ಸಮಿತಿ ರಚನೆ ಆಗಿ ಒಂದೂವರೆ ವರ್ಷ ಆಗಿದೆ. ಈಗ ಯಾಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂಬುದು ನಮಗೆ ತಿಳಿಯದು ಎಂದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…