ಮೈಸೂರು ನಗರ

ಗ್ಯಾರಂಟಿಯಿಂದ ಆರ್ಥಿಕ, ಆಹಾರ ಭದ್ರತೆ: ಭವ್ಯ ನರಸಿಂಹಮೂರ್ತಿ

ಮೈಸೂರು: ಗ್ಯಾರಂಟಿ ಯೋಜನೆಗಳಿಂದ ಬಡವರ, ಮಹಿಳೆಯರ ಆರ್ಥಿಕ, ಆಹಾರ ಭದ್ರತೆಯ ಕ್ರಾಂತಿಯಾಗಿದೆ ಎಂದು ಬಿಜೆಪಿ ನಾಯಕರ ವಿರೋಧಕ್ಕೆ ಕಾಂಗ್ರೆಸ್‌ನ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸದನದಲ್ಲಿ ಕುಳಿತು ಸುಮ್ಮನೆ ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲ. ಜನ ಸಾಮಾನ್ಯರ ಹತ್ತಿರ ಬಂದು ನೋಡಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತಿದೆ. ಆರ್ಥಿಕ, ಸಾಮಾಜಿಕ, ಧಾರ್ಮಿಕ ಸಬಲೀಕರಣ ಆಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ನೀಡುವ 2 ಸಾವಿರ ರೂಪಾಯಿಗಳು ಅವಳ ಆರೋಗ್ಯ ನೋಡಿಕೊಳ್ಳಲು ಉಪಯೋಗವಾಗಿದೆ. ಈ ಯೋಜನೆಗಳಿಂದ ಆರ್ಥಿಕ ಭದ್ರತೆ, ಆಹಾರ ಭದ್ರತೆ ಸಿಕ್ಕಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಅನುಕೂಲವಾಗಬೇಕೆಂದರೆ ಗ್ಯಾರಂಟಿ ಸಮಿತಿ ಬೇಕೆ ಬೇಕು. ಗ್ಯಾರಂಟಿ ಸಮಿತಿ ರಚನೆ ಆಗಿ ಒಂದೂವರೆ ವರ್ಷ ಆಗಿದೆ. ಈಗ ಯಾಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂಬುದು ನಮಗೆ ತಿಳಿಯದು ಎಂದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

11 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago