ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್‌ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ನ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದಾಗಿದೆ. ನಾನು ಈಗಲೂ ರಾಜ್ಯ ಘಟಕದ ಅಧ್ಯಕ್ಷನಾಗಿರುವುದರಿಂದ ಪಕ್ಷದ ಶಾಸಕರು ಹಾಗೂ ನಾಯಕರನ್ನು ಒಗ್ಗೂಡಿಸುವುದು ನನ್ನ ಕರ್ತವ್ಯವಾಗಿದೆ. ಅಲ್ಲದೇ ಹೀಗಿರುವ ಪಕ್ಷಕ್ಕೆ ಬೆಂಕಿ ಬಿದ್ದಿದ್ದು, ಶಾಸಕರೆಲ್ಲರೂ ತಮ್ಮ-ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕಿದೆ. ಹಾಗಾಗಿ ಪಕ್ಷದ ಶಾಸಕರೆಲ್ಲರೂ ಒಬ್ಬೋಬ್ಬರಾಗಿ ತಮ್ಮ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದಾರೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈಗಲಾದರೂ ಎಚ್.ಡಿ.ಕುಮಾರಸ್ವಾಮಿ ಅವರು ಬುದ್ಧಿ ಕಲಿಯಬೇಕಿದ್ದು, ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಕಂಪನಿಯಾಗಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಪಕ್ಷ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…
ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…
ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…
ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ…
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…