ಮೈಸೂರು: ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೈಸೂರು ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ.
ಸಂಜೆ 4 ಗಂಟೆಯವರೆಗೆ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆದು ಇಂದು ಸಂಜೆ 7 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಮೈಸೂರು, ನಂಜನಗೂಡು, ಟಿ.ನರಸೀಪುರ, ಹುಣಸೂರು, ಎಚ್.ಡಿ.ಕೋಟೆ, ಕೆ.ಆರ್.ನಗರ, ಪಿರಿಯಾಶಟ್ಟಣ, ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಸೇರಿದಂತೆ ಒಟ್ಟು 12 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ನಿರ್ದೇಶಕ ಸ್ಥಾನಗಳಿಗೆ ಶಾಸಕರಾದ ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್ ಗೌಡ, ಗಣೇಶ್ ಪ್ರಸಾದ್, ಪುಟ್ಟರಂಗಶೆಟ್ಟಿ ಸ್ಪರ್ಧೆ ಮಾಡಿದ್ದಾರೆ.





