ಮೈಸೂರು: ಎಲ್ಲರ ಬಾಳಿಗೆ ಬೆಳಕಾಗಬೇಕಾಗಿರುವ ವಿದ್ಯುತ್ ಹಲವರ ಪಾಲಿಗೆ ಮೃತ್ಯುಕೂಪವಾಗಿದ್ದು, ಜಾಗೃತಿ ಹಾಗೂ ನಿರ್ಲಕ್ಷ್ಯದಿಂದ ವಿದ್ಯುತ್ ಅವಘಡಕ್ಕೆ ನೂರಾರು ಜನ ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ವಿದ್ಯುತ್ ಅವಘಡಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದು, ಜನರೊಂದಿಗೆ ಜಾನುವಾರುಗಳ ಸಾವು ಕೂಡ ಹೆಚ್ಚಾಗುತ್ತಿರುವುದು ಆತಂಕದ ವಿಷಯವಾಗಿದೆ.
ಮೈಸೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಳೆದ ಐದು ವರ್ಷಗಳಲ್ಲಿ ವಿದ್ಯುತ್ ಅವಘಡದಿಂದ ಬರೋಬ್ಬರಿ 250 ಮಂದಿ ಬಲಿಯಾಗಿದ್ದಾರೆ.
ಇದರೊಂದಿಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ 413 ಜಾನುವಾರುಗಳು ಸಹ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿವೆ. ಸಾಕಷ್ಟು ವಿದ್ಯುತ್ ಅವಘಡ ಪ್ರಕರಣಗಳಲ್ಲಿ ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುವಂತಾಗಿದೆ.
ಈ ಅವಘಡ ಸಂಭವಿಸಲು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಲಾಗಿದ್ದು, ವಿದ್ಯುತ್ ಹರಿಯುತ್ತಿರುವ ತಂತಿ ಸ್ಪರ್ಶಿಸುವುದು, ನೆಲದ ಮೇಲೆ ಬಿದ್ದಿರುವ ತಂತಿ ತುಳಿಯುವುದು, ತಿಳುವಳಿಕೆ ಇಲ್ಲದೇ ವಿದ್ಯುತ್ ಉಪಕರಣಗಳನ್ನು ಬಳಸುವುದು, ವಿದ್ಯುತ್ ವಾಹಕಗಳ ಮಾರ್ಗದ ಬಳಿ ಕಬ್ಬಿಣದ ಸರಳು, ತಗಡು ಸ್ಪರ್ಶಿಸುವುದು, ಅನವಶ್ಯಕವಾಗಿ ವಿದ್ಯುತ್ ಕೆಲಸ ಮಾಡುವುದು ಸೇರಿದಂತೆ ಇತ್ಯಾದಿ ಕಾರಣಗಳನ್ನು ಹೇಳಿದೆ.
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…