ಕಿರಿಯ ಪವರ್ ಮ್ಯಾನ್ ಹುದ್ದೆಗೆ ಸಹನ ಶಕ್ತಿ ಪರೀಕ್ಷೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು.

ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರೂ ಹಾಗೂ ಸೆಸ್ಕ್‌ ಅಧ್ಯಕ್ಷರೂ ಆದ ರಮೇಶ್‌ ಬಂಡಿಸಿದ್ದೇಗೌಡ ಅವರು, ಕಿರಿಯ ಪವರ್‌ಮ್ಯಾನ್‌ ನೇಮಕಾತಿ ಸಹನ ಶಕ್ತಿ ಪರೀಕ್ಷೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ನೇಮಕಾತಿ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸಿಬ್ಬಂದಿ ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮವಾಗಿ ಕೆಲಸ ಮಾಡಬೇಕು, ಆ ಮೂಲಕ ನಿಗಮಕ್ಕೆ ಒಳ್ಳೆಯ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕುಎಂದು ಹೇಳಿದರಲ್ಲದೆ, ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಶುಭ ಕೋರಿದರು.

ಮೇ 16ರವರೆಗೆ ಸಹನ ಶಕ್ತಿ ಪರೀಕ್ಷೆ
ನಿಗಮದಲ್ಲಿ ಖಾಲಿ ಇರುವ 309 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆ ಮೇ 12ರಿಂದ 16ರವರೆಗೆ ನಡೆಯಲಿದೆ. ಪ್ರಥಮ ಹಂತದ ಸಹನ ಶಕ್ತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ಬಗೆಯ ಪರೀಕ್ಷೆ ನಡೆಸಲಾಗುವುದು. ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು, ಐದು ಪರೀಕ್ಷೆಗಳಲ್ಲಿ ಮೂರರಲ್ಲಿ ಅರ್ಹತೆಗಳಿಸಿಬೇಕಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ..

ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್‌ ಡಿ.ಜೆ. ದಿವಾಕರ್‌, ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಮುಖ್ಯ ಆರ್ಥಿಕ ಅಧಿಕಾರಿ ರೇಣುಕಾ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ. ಬಿ.ಆರ್.‌ ರೂಪ, ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌ ಸೇರಿದಂತೆ ಇನ್ನಿತರರು ಇದ್ದರು.

ದಾಖಲಾತಿ ತರುವುದು ಕಡ್ಡಾಯ:
ಸಹನ ಶಕ್ತಿ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಎಲ್ಲ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್‌ ಜೆರಾಕ್ಸ್‌ ಪ್ರತಿಯನ್ನು ಕಡ್ಡಾಯವಾಗಿ ತರಬೇಕಿದೆ.

“ಸಹನ ಶಕ್ತಿ ಪರೀಕ್ಷೆ ಮೂಲಕ ನಿಗಮಕ್ಕೆ ಆಯ್ಕೆಯಾಗುವ ಸಿಬ್ಬಂದಿ ಉತ್ತಮ ರೀತಿಯಲ್ಲಿ ಹಾಗೂ ತಮ್ಮ ಸುರಕ್ಷತೆಗೂ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು. ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮೆರಿಟ್‌ ಹಾಗೂ ಎಂಡುರೆನ್ಸ್‌ ಟೆಸ್ಟ್‌ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆ”. – ಕೆ.ಎಂ.ಮುನಿಗೋಪಾಲ್‌ ರಾಜು, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌.

ಆಂದೋಲನ ಡೆಸ್ಕ್

Recent Posts

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

24 mins ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

54 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

1 hour ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

6 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

6 hours ago