Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವರ್ಷ ಜುಲೈ.17ರಿಂದ ಆಗಸ್ಟ್.‌7ರ ಅವಧಿಯಲ್ಲಿ ವಿಶೇಷ ಪೂಜಾ ದಿನಗಳಿರುತ್ತವೆ.

ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರವು ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಿದೆ.

ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌, ಪ್ರಾಧಿಕಾರದ ಕಾರ್ಯದರ್ಶಿ ರೂಪಾ, ಡಿಸಿಪಿ ಸುಂದರ್‌ರಾಜ್‌ ಭಾಗಿಯಾಗಿದ್ದರು.

ಸಭೆಯಲ್ಲಿ ಆಷಾಢ ಶುಕ್ರವಾರದಲ್ಲಿ ಪಾರ್ಕಿಂಗ್‌ ವ್ಯವಸ್ಥೆ, ದರ್ಶನದ ವ್ಯವಸ್ಥೆ, ಮೂಲ ಸೌಕರ್ಯಗಳ ವ್ಯವಸ್ಥೆ ಕುರಿತಂತೆ ಚರ್ಚೆ ನಡೆಯಿತು.

ಸಭೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಅವರು, ಶುಕ್ರವಾರ, ಶನಿವಾರ ಹಾಗೂ ಭಾನುವಾರದಂದು ಬೆಟ್ಟಕ್ಕೆ ಮೇಲಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ಭಕ್ತರು ಖಾಸಗಿ ವಾಹನಗಳನ್ನು ಲಲಿತ ಮಹಲ್‌ ಬಳಿ ನಿಲ್ಲಿಸಬೇಕು. ಅಲ್ಲಿಂದ ಬೆಟ್ಟಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಸಾಮಾನ್ಯ ಭಕ್ತರು ಅನಗತ್ಯವಾಗಿ ಹೆಚ್ಚು ಸಮಯ ಕಾಯುವುದನ್ನು ತಪ್ಪಿಸಿ, ಸುಗಮವಾಗಿ ದೇವಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Tags:
error: Content is protected !!