ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು.
ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ನೂರಾರು ಭಾಷೆಗಳ ವೈವಿಧ್ಯತೆ ಇದ್ದರೂ ಧರ್ಮ ಹಾಗೂ ಸಂಸ್ಕೃತಿ ವಿಚಾರದಲ್ಲಿ ನಾವು ಏಕತೆಯನ್ನು ಹೊಂದಿದ್ದೇವೆ. ಇದು ಭಾರತೀಯ ಭಾಷಾ ಸೌಂದರ್ಯವನ್ನು ತೋರ್ಪಡಿಸುತ್ತದೆ ಎಂದರು.
ಇದನ್ನು ಓದಿ : ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು
ಪ್ರಪಂಚದ ಬೇರೆ-ಬೇರೆ ದೇಶಗಳನ್ನು ನೋಡಿದರೆ ಅಲ್ಪ ಬದಲಾವಣೆ ಹೊರತಾಗಿ ಅಲ್ಲಿ ಒಂದೇ ರೀತಿಯ ಭಾಷೆ, ಆಚಾರ-ವಿಚಾರಗಳು ಇರುತ್ತವೆ. ನೂರಾರು ಕಿಲೋ ಮೀಟರ್ ಸುತ್ತಿದರೂ ಒಂದೇ ಭಾಷೆ ಮಾತ ನಾಡುವವರು ಸಿಗುತ್ತಾರೆ. ಆದರೆ, ಭಾರತದಲ್ಲಿ ಅಂತಹ ವಾತಾವರಣ ಕಾಣುವುದಿಲ್ಲ. ಇಲ್ಲಿ ಕನ್ಯಾಕುಮಾರಿ ಯಲ್ಲಿ ರೈಲನ್ನು ಹತ್ತಿ ಕಾಶ್ಮೀರದ ಕಡೆಗೆ ಪ್ರಯಾಣ ಶುರು ಮಾಡಿದರೆ, ನಿಲ್ದಾಣಕ್ಕೊಂದು ಭಾಷೆ ಬದಲಾವಣೆ ಯಾಗುತ್ತದೆ. ಆಹಾರ ಪದ್ಧತಿಯೂ ಅದೇ ರೀತಿ ಬದಲಾವಣೆಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಐಐಎಲ್‌ನ ಉಪ ನಿರ್ದೇಶಕ ಪ್ರೊ.ಪಿ.ಆರ್.ಧರ್ಮೇಶ್ ಫರ್ನಾಂಡೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ‘ಭಾಷೆ, ರಾಷ್ಟ್ರೀಯತೆ ಮತ್ತು ಸಂಸ್ಕೃತಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಿಐಐಎಲ್ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಲ್.ಆರ್.ಪ್ರೇಮಕುಮಾರ್ ಉಪಸ್ಥಿತರಿದ್ದರು.
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…