ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ
ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು
ಇಂದು (ಏ.16) ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ 02 ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾಮಂದಿರದಲ್ಲಿ ಇರುವ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ಆಚರಣೆ ಮಾಡಲಾಗುವುದು. ಮೇ 04 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು.
ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ 9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೇ 10 ರಂದು ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಆಚರಣೆ, ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.
ಮೆರವಣಿಗೆ ಪ್ರಾರಂಭವಾಗುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಚತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು.
ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…