ಮೈಸೂರು: ಮೈಸೂರಿನಲ್ಲಿ ಅವಧಿಗೂ ಮುನ್ನವೇ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದ ಮಾಲೀಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಮೈಸೂರಿನ ಹೆಬ್ಬಾಳ, ಲೋಕನಾಯಕನಗರ, ವಿಜಯನಗರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅವಧಿಗೂ ಮುನ್ನವೇ ಬಾರ್ ತೆರೆದಿದ್ದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು.
ಬೆಳಿಗ್ಗೆ ಆರು ಗಂಟೆಗೂ ಮುಂಚೆ ಮದ್ಯದಂಗಡಿಗಳನ್ನು ಓಪನ್ ಮಾಡಿದ್ದ ಮಾಲೀಕರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಕಕ್ಕಾಬಿಕ್ಕಿಯಾಗಿ ಅಂಗಡಿಗಳನ್ನು ಕ್ಲೋಸ್ ಮಾಡಿದರು. ಈ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹೊರಟರು.





