Mysore
33
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ಕೆಂಪುಕೋಟೆಯಲ್ಲಿ ಸ್ಪೋಟ ; ಮೈಸೂರಲ್ಲೂ ಕಟ್ಟೆಚ್ಚರ

ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ನಗರದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸ್ ಅಧಿಕಾರಿಗಳು ನಗರದ ರೈಲು ನಿಲ್ದಾಣ, ಗ್ರಾಮಾಂತರ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ, ಮಾಲ್‌ಗಳು, ಮಾರುಕಟ್ಟೆ ಮುಂತಾದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿರುವ ಅನುಮಾನಸ್ಪದ ವಾಹನಗಳ ಬಗ್ಗೆ ಕೂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ನಗರಕ್ಕೆ ಹೊರಗಿನಿಂದ ಬರುವ ಹಾನಗಳ ಮೇಲೂ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

Tags:
error: Content is protected !!