ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ನಗರದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸ್ ಅಧಿಕಾರಿಗಳು ನಗರದ ರೈಲು ನಿಲ್ದಾಣ, ಗ್ರಾಮಾಂತರ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ, ಮಾಲ್‌ಗಳು, ಮಾರುಕಟ್ಟೆ ಮುಂತಾದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿರುವ ಅನುಮಾನಸ್ಪದ ವಾಹನಗಳ ಬಗ್ಗೆ ಕೂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ನಗರಕ್ಕೆ ಹೊರಗಿನಿಂದ ಬರುವ ಹಾನಗಳ ಮೇಲೂ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…