Mysore
22
moderate rain

Social Media

ಶನಿವಾರ, 30 ಮೇ 2026
Light
Dark

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಬೃಂದಾವನ ಬಡಾವಣೆಯ 2ನೇ ಹಂತ, 6ನೇ ಕ್ರಾಸ್‌ನಲ್ಲಿರುವ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಬಂಧಿತ ಶ್ರೀನಿವಾಸ್‌ನನ್ನು ದಿಢೀರ್ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲೆ ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದರು. ಒಂದೇ ತಿಂಗಳಲ್ಲಿ ಹಲವು ಬಾರಿ ಇಂತಹ ಸಂದೇಶಗಳನ್ನು ರವಾನಿಸಿದ್ದ ಆರೋಪಿ ಈ ಕೃತ್ಯವನ್ನು ನಿಗೂಢವಾಗಿ ಮುಂದುವರಿಸುತ್ತಿದ್ದ ಎಂದು ತಿಳಿದುಬಂದಿದೆ.

ದೆಹಲಿ ಪೊಲೀಸ್ ತಂಡವು ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆರೋಪಿಯ ಮನೆಯಿಂದ ಹಲವು ಸಿಮ್ ಕಾರ್ಡ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಲಾಗಿತ್ತು. ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:
error: Content is protected !!