ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಬೃಂದಾವನ ಬಡಾವಣೆಯ 2ನೇ ಹಂತ, 6ನೇ ಕ್ರಾಸ್‌ನಲ್ಲಿರುವ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಬಂಧಿತ ಶ್ರೀನಿವಾಸ್‌ನನ್ನು ದಿಢೀರ್ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲೆ ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದರು. ಒಂದೇ ತಿಂಗಳಲ್ಲಿ ಹಲವು ಬಾರಿ ಇಂತಹ ಸಂದೇಶಗಳನ್ನು ರವಾನಿಸಿದ್ದ ಆರೋಪಿ ಈ ಕೃತ್ಯವನ್ನು ನಿಗೂಢವಾಗಿ ಮುಂದುವರಿಸುತ್ತಿದ್ದ ಎಂದು ತಿಳಿದುಬಂದಿದೆ.
ದೆಹಲಿ ಪೊಲೀಸ್ ತಂಡವು ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆರೋಪಿಯ ಮನೆಯಿಂದ ಹಲವು ಸಿಮ್ ಕಾರ್ಡ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಲಾಗಿತ್ತು. ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…