ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಪ್ರತಿಮೆ ಮುಂಭಾಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ ತಮ್ಮ ಕಲಾ ಸೇವೆ ನಿರಂತರವಾಗಿರಲಿ, ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಾಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿ ಬರಲಿ ಎಂದು ಹಾರೈಸುತ್ತೇನೆ ಎಂದರು.
ಮಯೂರ ಕನ್ನಡ ಯುವಕರ ಅಧ್ಯಕ್ಷರಾದ ಜಿ ರಾಘವೇಂದ್ರ, ಕೆಪಿಸಿಸಿ ಸದಸ್ಯರಾದ ನಜರ್‌ಬಾದ್ ನಟರಾಜ್, ಕಿಶೋರ್ ಕುಮಾರ್, ಎಸ್.ಎನ್.ರಾಜೇಶ್, ಮೋಹನ್, ಮಂಜುನಾಥ್, ರವಿಚಂದ್ರ, ಸುಚಿಂದ್ರ, ಚಕ್ರಪಾಣಿ, ಹರೀಶ್ ನಾಯ್ಡು, ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.





